ಯಾರು ಏನೇ ಬೆದರಿಕೆ ಹಾಕಿದರೂ ನಮ್ಮ ಮಾತು ಉಳಿಸಿಕೊಳ್ಳುತ್ತೇವೆ : ಡಿಕೆಶಿ

ಬೆಂಗಳೂರು

      ಯಾರೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೋ ಅಂತಹವರ ಮೇಲೆ ಐಟಿ ದಾಳಿಯಾಗುತ್ತಿದ್ದು, ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

     ಸುದ್ದಿಗಾರರ ಜೊತೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನೀಡುತ್ತದೆ. ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದು, ರಾಜ್ಯದಲ್ಲಿ ಬದಲಾವಣೆ ತರಲಿದ್ದಾರೆ. ಮೇ 10ರಂದು ಕೇವಲ ಮತದಾನದ ದಿನ ಮಾತ್ರವಲ್ಲ, ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟಾಚಾರ ಬಡಿದೋಡಿಸುವ ದಿನ. ಎಲ್ಲರ ಮನೆಯಲ್ಲಿ ಜ್ಯೋತಿ ಹತ್ತಿಸುವ ಸುದಿನ. ಚುನಾವಣೆಯಲ್ಲಿ ಕಾಂಗ್ರೆಸ್ 141ರಿಂದ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಮೊದಲ ಸಂಪುಟದಲ್ಲೇ ನಾವು ನಮ್ಮ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ? ಎಂದು ತಿಳಿಸಿದರು.

       ಕಾಂಗ್ರೆಸ್ ಪಕ್ಷ ರಘುನಾಥ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರಿಗೆ ಅನೇಕ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ನಾನು ಕೂಡ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗುತ್ತಿದ್ದಾರೆ? ಎಂದು ತಿಳಿಸಿದರು.

      ಬಿ.ವಿ. ನಾಯ್ಕ್ ಅವರು ನಿರಾಣಿ ಅವರನ್ನು ಭೇಟಿ ಮಾಡಿ ಬಿಜೆಪಿ ಸೇರುವ ಬಗ್ಗೆ ಚರ್ಚೆ ಇದ್ದು, ಅವರ ಸೊಸೆಗೆ ನೀಡಲಾಗಿರುವ ಟಿಕೆಟ್ ಅನ್ನು ಬೇರೆಯವರಿಗೆ ನೀಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ?ಅವರ ಸೊಸೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆ. ಅವರ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ನನ್ನವರೆಗೂ ಬಂದಿಲ್ಲ. ಅಲ್ಲಿ ನಮ್ಮ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ ಎಂದರು.

    ಎಸ್.ಆರ್ ಪಾಟೀಲ್ ಅವರನ್ನು ಬಿಜೆಪಿ ಸೆಳೆಯಲು ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ?ಕಳೆದ ಮೂರು ತಿಂಗಳಿಂದ ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಎಸ್.ಆರ್ ಪಾಟೀಲ್ ಅವರು ಹಿರಿಯ ನಾಯಕರು. ನಾವು ಅವರ ಜತೆ ಮಾತನಾಡಿದ್ದೇವೆ? ಎಂದು ತಿಳಿಸಿದರು.

   ಮಂಡ್ಯ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ, ನಮ್ಮ ಅಭ್ಯರ್ಥಿ ತೀರ್ಮಾನವಾಗಿದೆ. ನೋಡೋಣ, ಅವರು ಚೆಸ್ ಆಡುತ್ತಿದ್ದು, ನಾವು ಕೂಡ ಆಡುತ್ತಿದ್ದೇವೆ?. ?ಬಿಜೆಪಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಮಾಡಿ ಅವರಿಂದ ಅಧಿಕಾರ ಕಸಿದುಕೊಂಡರು. ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ. ಬಿಜೆಪಿಯು ಲಿಂಗಾಯತ ಸಮುದಾಯದ ಮಠಾಧೀಶರನ್ನು ದುರುಪಯೋಗ ಮಾಡಿಕೊಳ್ಳಲು ಆಗುವುದಿಲ್ಲ. ಯಡಿಯೂರಪ್ಪ ಅವರ ಕಣ್ಣೀರು ಒರೆಸಲು ಬಿಜೆಪಿಯವರಿಂದ ಸಾಧ್ಯವಾಗಿಲ್ಲ. ಯಡಿಯೂರಪ್ಪ ಅವರ ಆಪ್ತರೆಲ್ಲರೂ ಬಿಜೆಪಿ ತೊರೆದಿದ್ದಾರೆ. ಈಗ ಆ ಬಗ್ಗೆ ಚರ್ಚೆ ಮಾಡುವುದಿಲ್ಲ. ಒಟ್ಟಿನಲ್ಲಿ ಬಸವಣ್ಣನವರ ತತ್ವ ಕಾಂಗ್ರೆಸ್ ತತ್ವ ಒಂದೇ ಆಗಿದೆ? ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap