ಹಾಸನ
ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದ ನಂತರ 7 ನೇ ವೇತನ ಆಯೋಗ ಜಾರಿಗೊಳಿಸಲು ನಾವು ಬದ್ದರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸರ್ಕಾರಿ ನೌಕರರ ನೋವು, ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ಅವರು ತಮ್ಮ ಹಕ್ಕನ್ನು ಕೇಳುತ್ತಿದ್ದು, ಅದನ್ನು ನೀಡಲು ಕಾಂಗ್ರೆಸ್ ಬದ್ಧವಾಗಿದೆ. ಅವರ ಹೋರಾಟ ಅವರ ಮೂಲಭೂತ ಹಕ್ಕು. ಈ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದಲ್ಲಿ ಮುಳುಗಿಸಿದೆ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.
ಪ್ರಧಾನಿಗಳು ಯಡಿಯೂರಪ್ಪನವರಿಗೆ ತಲೆಬಾಗಿ ನಮಿಸಿದರೆ ಸಾಲದು. ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ಎಂಬ ವಿಚಾರವಾಗಿ ಸ್ಪಷ್ಟತೆ ನೀಡಬೇಕು. ಅವರ ಕುಟುಂಬಕ್ಕೆ ತನಿಖೆ ಸಂಸ್ಥೆಗಳ ವಿಚಾರಣೆ ಹೆಸರಲ್ಲಿ ನೀಡಿದ ಕಿರುಕುಳದ ಬಗ್ಗೆ ಮಾತನಾಡಲಿ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಸುವುದೇ ಆದರೆ, ಅವರನ್ನು ಇವತ್ತೇ ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದು ಹೇಳಿದರು.