ಜನರ ಸಮಸ್ಯೆ ಬಗೆಹರಿಸಲು ಎಲ್ಲರ ಜೊತೆಗೂಡಿ ಕೆಲಸ ಮಾಡುತ್ತೇವೆ : ರಹೀಂ ಖಾನ್‌

ಬೆಂಗಳೂರು

    ಪೌರಾಡಳಿತ ಇಲಾಖೆಯಿಂದ 5 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬರಗಾಲದಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಜೊತೆಗೂಡಿ ಸಾಕಷ್ಟು ಸಭೆಗಳನ್ನು ನಡೆಸಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಸದಾ ಜನರ ಜೊತೆ ಸಂಪರ್ಕದಲ್ಲಿ ಇದ್ದು ಕೆಲಸ ಮಾಡುತ್ತಿದ್ದೇವೆ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪಡೆದುಕೊಳ್ಳಲು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದೇನೆ. ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪದೇ, ಪದೇ ವಿಧಾನಸೌಧಕ್ಕೆ ಬರಲು ಆಗುವುದಿಲ್ಲ. ಅಲ್ಲಿ ಎಲ್ಲರಿಗೂ ಅವಕಾಶ ಸಿಗುವುದು ಕಡಿಮೆ ಆದ ಕಾರಣ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡುವ ಆಲೋಚನೆ ಇದಾಗಿದೆ ಎಂದರು.

    ಸುಮಾರು 50 ಕ್ಕೂ ಹೆಚ್ಚು ಮಂದಿ ಕಚೇರಿಯಲ್ಲಿ ಭೇಟಿಯಾಗಿ, ತಮ್ಮ ಮನವಿಗಳನ್ನು ಸಲ್ಲಿಸಿದ್ದಾರೆ. ಸ್ಥಳದಲ್ಲೇ ಬಗೆಹರಿಸುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲಾಗಿದೆ. ನಮ್ಮ ಇಲಾಖೆ ವ್ಯಾಪ್ತಿಯ ಕೆಲಸಗಳನ್ನು ತಕ್ಷಣ ಹಿರಿಯ ಅಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಸೇರಿದಂತೆ ಇತರರಿಗೆ ಸೂಚನೆ ನೀಡಲಾಗಿದೆ. ಇತರೇ ಇಲಾಖೆಗಳ ಅಧಿಕಾರಿಗಳಿಗೆ ಸಂಭಂದಿಸಿದ ಕೆಲಸಗಳನ್ನೂ ಸಹ ಗಮನದಲ್ಲಿ ಇಟ್ಟುಕೊಂಡು ಶೀಘ್ರ ಬಗೆಹರಿಸುವಂತೆ ಅವರಿಗೂ ಸೂಚನೆ ನೀಡಿದ್ದೇನೆ ಎಂದರು.

    ನಮ್ಮ ಪೌರಾಡಳಿತ ಇಲಾಖೆ ಅತ್ಯಂತ ದೊಡ್ಡದು, ಆದ ಕಾರಣ ಈಗಾಗಲೇ ಬೀದರ್, ಗುಲ್ಬರ್ಗಾ ವಿಭಾಗೀಯ ಮಟ್ಟ, ರಾಣೆಬೆನ್ನೂರು, ಬೆಂಗಳೂರು ವಿಭಾಗ ಸೇರಿದಂತೆ ಅನೇಕ ಕಡೆ ಪ್ರಗತಿ ಪರಿಶೀಲನೆ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ ನಡೆಸಲಾಗಿದೆ. ಇಲಾಖೆಯ ಜಿಲ್ಲಾ ಹಾಗೂ ವಿಭಾಗೀಯ ಮಟ್ಟದ ಅಧಿಕಾರಿಗಳ ಸಭೆಯನ್ನು ಕಾಲ,ಕಾಲಕ್ಕೆ ಮಾಡಲಾಗುತ್ತಿದೆ, ಅಲ್ಲದೇ ಚಿತ್ರದುರ್ಗದಲ್ಲಿ ಉಂಟಾಗಿದ್ದ ಸಮಸ್ಯೆಯನ್ನು ಕೂಡಲೇ ಬಗೆಹರಿಸಲಾಗಿದೆ ಎಂದು ಸಚಿವ ರಹೀಂ ಖಾನ್ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap