ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾರೂ ಪ್ರಯತ್ನಿಸುತ್ತಿಲ್ಲ : ಬಿ ಎಸ್‌ ವೈ

ಬೆಂಗಳೂರು: 

    ಲಂಚ ಸ್ವೀಕಾರದ ಆರೋಪದಲ್ಲಿ ಸಿಕ್ಕಿಬಿದ್ದ  ಶಾಸಕ ಮತ್ತು ಅವರ ಮಗನನ್ನು ತಾವಾಗಲಿ ತಮ್ಮ ಪಕ್ಷವಾಗಲಿ ಅಥವಾ ಸರ್ಕಾರವಾಗಲಿ ರಕ್ಷಿಸುವುದಿಲ್ಲ ಮತ್ತು ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾರೂ ಪ್ರಯತ್ನಿಸುತ್ತಿಲ್ಲ. ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ, ನಾನು ಅದರ ಬಗ್ಗೆ ಇನ್ಮುಂದೆ ಮಾತನಾಡುವುದಿಲ್ಲ’ ಎಂದು ಅವರು ಹೇಳಿದರು.

   ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು.ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಸಿದ್ಧತೆ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. 

    ಅವರ ಪುತ್ರ ಪ್ರಶಾಂತ್ ಮಾಡಾಳ್ ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ. ಈ ಬೆಳವಣಿಗೆ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap