ಬೆಂಗಳೂರು
ಸರ್ಕಾರಿ ನೌಕರರು ಮಾರ್ಚ್ 1ರಿಂದ ಉದ್ದೇಶಿಸಿರುವ ಉದ್ಯೋಗಕ್ಕೆ ಗೈರು ಹಾಜರಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಅವರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದು, ಮುಷ್ಕರದ ಕರೆ ವಾಪಸ್ ಪಡೆಯಬೇಕೆಂದರೆ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ವಾಪಸ್ ಪಡೆದುಕೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.