ಬೆಂಗಳೂರು:
ಮುಂಬರುವ ಲೋಕಸಬಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಹೋರಾಟ ನಡೆಸಲಿದೆ. ಆದಾಗ್ಯೂ, ಪರಿಸ್ಥಿತಿ ಆಧಾರಿಸಿ ಪಕ್ಷ ಮುಂದೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಈ ತಿಂಗಳ ಆರಂಭದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಗೆ ತಮ್ಮ ಉಪಸ್ಥಿತಿ ಇರಬೇಕೆಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಯಸಿದ್ದರೂ ಕರ್ನಾಟಕದ ಕಾಂಗ್ರೆಸ್‌ನ ಒಂದು ವರ್ಗ ಅಂತಹ ಕ್ರಮವನ್ನು ವಿರೋಧಿಸಿದ್ದರಿಂದ ತಮ್ಮಗೆ ಆಹ್ವಾನ ನೀಡಿರಲಿಲ್ಲ ಎಂದು ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಳೆದ ವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಿಧ ವಿಷಯಗಳಲ್ಲಿ ಬಿಜೆಪಿಯೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳುವ ಮೂಲಕ ಮುಂದಿನ ವರ್ಷದ ಚುನಾವಣೆಗೆ ಎರಡು ಪಕ್ಷಗಳು ಕೈಜೋಡಿಸುತ್ತವೆ ಎಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ನೀಡಿದ್ದರು. ಆದರೆ, ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ದೇವೇಗೌಡರು, ಅಂತಹ ಊಹಾಪೋಹಗಳನ್ನು ತಳ್ಳಿಹಾಕಿದರು.
ಜುಲೈ 17 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳು ತಮ್ಮನ್ನು ಏಕೆ ಆಹ್ವಾನಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ದೇವೇಗೌಡರನ್ನು ಆಹ್ವಾನಿಸಿದರೆ ಕಾಂಗ್ರೆಸ್‌ನ ಒಂದು ವರ್ಗ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಬೆದರಿಕೆ ಹಾಕಿತ್ತು. ಹೀಗಾಗಿ ನನ್ನನ್ನು ಕರೆಯಲಿಲ್ಲ. ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಲು ಬಯಸಿದ್ದರು ಆದರೆ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ ಪರವಾಗಿರಲಿಲ್ಲ ಎಂದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ನೀಡಿ ಕೇವಲ 19 ಸ್ಥಾನಗಳನ್ನು ಗಳಿಸಿತ್ತು. 1983ರಿಂದ ಇಂದಿನವರೆಗೂ ಪಕ್ಷ ಅಸ್ತಿತ್ವದಲ್ಲಿದೆ ಮತ್ತು ಮುಂದೆಯೂ ಇರುತ್ತದೆ.ಪಕ್ಷ ಮುಗಿಯುತ್ತದೆ ಎಂದುಕೊಂಡವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಗೌಡರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ