ಬೆಂಗಳೂರು:
ರಾಜ್ಯದ ಎಲ್ಲ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು ಮತ್ತು ಆ ಸಮುದಾಯಗಳಿಗೆ ಸೇರಿದವರಿಗೆ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭರವಸೆ ನೀಡಿದರು.
ಪ್ರತ್ಯೇಕ ನಿಯೋಗದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು ಶುಕ್ರವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಇಂಡಿಯನ್ ಕ್ರಿಶ್ಚಿಯನ್ ಫೋರಮ್ ಪರವಾಗಿ ಪಾದ್ರಿಗಳ ನಿಯೋಗ ಮತ್ತು ವಿವಿಧ ಕ್ರಿಶ್ಚಿಯನ್ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮತಾಂತರ ತಡೆ ಕಾಯ್ದೆ ಅಸಂವಿಧಾನಿಕ ಎಂದಿರುವ ಹೇಳಿದ ಮುಖ್ಯಮಂತ್ರಿಗಳು, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ನಿಯೋಗಕ್ಕೆ ತಿಳಿಸಿದರು.
ಇದೇ ವೇಳೆ ಮತಾಂತರ ತಡೆ ಕಾಯ್ದೆಯಡಿ ಪಾದ್ರಿಗಳ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿಗಳು, ಬಜೆಟ್‌ನಲ್ಲಿ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು
ಮುಸ್ಲಿಂ ಸಮುದಾಯದ ಸದಸ್ಯರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಈಗಾಗಲೇ ಕಾಂಗ್ರೆಸ್ ಭರವಸೆಗಳನ್ನು ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.