ಬೆಳಗಾವಿ ಜಿಲ್ಲೆಯ ಗರಿಷ್ಠ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಲಕ್ಷ್ಮಣ ಸವದಿ

ಬೆಂಗಳೂರು

     ಬೆಳಗಾವಿ ಅಖಂಡ ಜಿಲ್ಲೆಯಲ್ಲಿ ಬರುವ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಸಾಧಿಸಲು ಎಲ್ಲ ನಾಯಕರು ಒಂದಾಗಿ ಶ್ರಮಿಸುತ್ತಿದ್ದು ಕನಿಷ್ಠ 15 ಸ್ಥಾನಗಳಲ್ಲಿ ಗೆಲುವು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ  ಸವದಿ ಹೇಳಿದರು. ಕಾಗವಾಡ ಮತಕ್ಷೇತ್ರದ ಐನಾಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಬರುವ ಚುನಾವಣೆಯಲ್ಲಿ 140 ಕ್ಕೂ ಅಧಿಕ ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಏರಲಿದೆ ಎಂದರು.

    ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಪ್ರತಿ ಮತಕ್ಷೇತ್ರದಲ್ಲಿ ವೈಯಕ್ತಿಕವಾಗಿ ಎಲ್ಲ ಪಕ್ಷದಲ್ಲಿರುವ ನಾಯಕರು ಗೆಳೆಯರಿದ್ದು ಅವರೆಲ್ಲರೂ ಬರುವ ದಿನಗಳಲ್ಲಿ ಬಿಜೆಪಿಗೆ ಪ್ರಚಾರ ಮಾಡಲಿದ್ದಾರೆ. ಜಿಲ್ಲೆಯಲ್ಲಿ ನಾವೆಲ್ಲರೂ ಒಂದಾಗಿದ್ದು ಬಿಜೆಪಿ ಅಧಿಕಾರಕ್ಕೆ ತರಲು ಪ್ರತಿ ಕ್ಷೇತ್ರದಲ್ಲೂ ವಿಜಯ ಸಂಕಲ್ಪ ಯಾತ್ರೆ ಸಂಚರಿಸುತ್ತಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಶ್ರೀಮಂತ ಪಾಟೀಲ, ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಜಿಲ್ಲಾ ಮತ್ತು ಸ್ಥಳೀಯ ಮುಖಂಡರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ