ಪ.ಬಂಗಾಳ ಪಂಚಾಯತ್‌ ಚುನಾವಣೆ : ಭುಗಿಲ್ಲೆದ್ದ ಹಿಂಸಾಚಾರ

ನವದೆಹಲಿ :

    ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತರು ಸೇರಿ ಹಲವರು ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ.

    ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ರಾಜ್ಯದ ಹಲವೆಡೆ ತೀವ್ರ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. ಇದಾದ ನಂತರ ಮತದಾನ ದಿನವಾದ ಇಂದು ಕೂಡ ಅಂಥದ್ದೇ ಘಟನೆಗಳು ನಡೆದಿವೆ.

    ಮತದಾನ ಆರಂಭಕ್ಕೂ ಕೆಲವೇ ಗಂಟೆಗಳ ಮೊದಲು ಮುರ್ಷಿದಾಬಾದ್‌ನಲ್ಲಿ ತಡರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಮನೆಯೊಂದನ್ನು ಧ್ವಂಸಮಾಡಿದ್ದಾರೆ.

 
     ಈ ನಡುವೆ ಆರೋಪಗಳನ್ನು ಟಿಎಂಸಿ ನಿರಾಕರಿಸಿದೆ.ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರೊಬ್ಬರನ್ನು ಥಳಿಸಿ ಉತ್ತರ 24 ಪರಗಣ ಜಿಲ್ಲೆಯ ಕದಂಬಗಚಿ ಪ್ರದೇಶದಲ್ಲಿ ಹತ್ಯೆ ಮಡಾಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 
      ಮೃತ ವ್ಯಕ್ತಿಯನ್ನು 41 ವರ್ಷದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಹಲ್ಲೆ ಬಳಿಕ ಅಬ್ದುಲ್ಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆಂದು ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮುಖರ್ಜಿ ತಿಳಿಸಿದ್ದಾರೆ.ಈ ನಡುವೆ ಹತ್ಯೆಯನ್ನು ವಿರೋಧಿಸಿ ಸ್ಥಳೀಯರು ಮುಂಜಾನೆ ಟಾಕಿ ರಸ್ತೆಯನ್ನು ತಡೆದು, ಪ್ರತಿಭಟನೆ ನಡೆಸಿದರು.
    ಮುರ್ಷಿದಾಬಾದ್ ಜಿಲ್ಲೆಯ ಕಪಾಸ್‌ದಂಗ ಪ್ರದೇಶದಲ್ಲೂ ರಾತ್ರೋರಾತ್ರಿ ಹಿಂಸಾಚಾರ ಸಂಭವಿಸಿದ್ದು, ಘಟನೆಯಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಬಾಬರ್ ಅಲಿ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
     ಘಟನೆ ಸಂಬಂಧ ಟ್ವೀಟ್ ಮಾಡಿರುವ ಟಿಎಂಸಿ,  ‘ರೆಜಿನಗರ, ತುಫಂಗಂಜ್ ಮತ್ತು ಖಾರ್‌ಗ್ರಾಮ್‌ನಲ್ಲಿ ನಮ್ಮ ಪಕ್ಷದ ಮೂವರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಡೊಮ್‌ಕೋಲ್‌ನಲ್ಲಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್‌ ಪಕ್ಷಗಳು ಹಿಂಸಾಚಾರ ನಡೆಸುತ್ತಿವೆ. ಚುನಾವಣೆಯ ಹಿನ್ನೆಲೆ ಕೇಂದ್ರ ಪಡೆಗಳನ್ನು ರಾಜ್ಯದಲ್ಲಿ ನಿಯೋಜನೆ ಮಾಡಲಾಗಿದ್ದರೆ, ಅವುಗಳು ಈಗ ಎಲ್ಲಿವೆ’ ಎಂದು ಪ್ರಶ್ನಿಸಿ ಪ್ರಶ್ನೆ ಮಾಡಿದೆ.

    ಕೇಂದ್ರ ಪಡೆಗಳ ಭದ್ರತೆ ಮಧ್ಯೆಯೂ ಸಾವಿನ ಸಂಖ್ಯೆ ಹೆಚ್ಚುತ್ತಿವೆ. ಮಾಲ್ಡಾದ ಮಾಣಿಕ್‌ಚಕ್‌ನಲ್ಲಿ ಬಾಂಬ್ ದಾಳಿಯ ನಡೆಸಲಾಗಿದೆ. ಇದು ನಮ್ಮ ಪಕ್ಷದ ಕಾರ್ಯಕರ್ತನನ್ನು ಬಲಿ ತೆಗೆದುಕೊಂಡಿದೆ. ನಾಡಿಯಾದ ನಾರಾಯಣಪುರ ಗ್ರಾಮ ಪಂಚಾಯತಿ ಅಭ್ಯರ್ಥಿ ಹಸೀನಾ ಸುಲ್ತಾನ್​ ಅವರ ಪತಿಯ ಮೇಲೆ ಗುಂಡು ಹಾರಿಸಲಾಗಿದೆ. ಮತದಾನ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಕಚ್ಚಾ, ದೇಶಿ ನಿರ್ಮಿತ ಬಾಂಬ್‌ಗಳನ್ನು ನಮ್ಮ ಕಾರ್ಯಕರ್ತರ ಮೇಲೆ ಎಸೆಯಲಾಗಿದೆ’ ಎಂದು ​​ಆರೋಪಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap