ಸುಳ್ಳಿನ ಉರಿಗೌಡ, ನಂಜೇಗೌಡ ಹಾಗಿರಲಿ; ಜೀವಂತ ಉರಿಗೌಡ, ನಂಜೇಗೌಡರ ಪಾಡೇನು?

ಬೆಂಗಳೂರು :

     ಇತಿಹಾಸದಲ್ಲಿ ಇಲ್ಲದ ಉರಿಗೌಡ, ನಂಜೇಗೌಡ ಹೆಸರುಗಳನ್ನು ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿ, ಜೀವಂತ ಇರುವ ಉರಿಗೌಡ, ನಂಜೇಗೌಡ ಅವರನ್ನು ಕೋಮು ದಳ್ಳುರಿಯಲ್ಲಿ ಬೇಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಉರಿಗೌಡ, ನಂಜೇಗೌಡ ಇದ್ದರೋ ಇಲ್ಲವೋ ಗೊತ್ತಿಲ್ಲ. ಜೀವಂತ ಬದುಕಿರುವ ಉರಿಗೌಡ, ನಂಜೇಗೌಡರ ಬಗ್ಗೆ ಯೋಚಿಸಬೇಕು ಎಂದು ರೈತರ ಕುರಿತಾಗಿ ಅವರು ಹೇಳಿದರು.

    ಈ ವಿಚಾರ ಈಗ ಅಪ್ರಸ್ತುತ. ಒಂದು ಸಮಾಜ, ಇನ್ನೊಂದು ಸಮಾಜವನ್ನು ಅನುಮಾನದಿಂದ ನೋಡುವಂತಾಗಿದೆ. ಬಿಜೆಪಿ ನೈತಿಕತೆ ಉಳಿಸಿಕೊಳ್ಳದೆ ಇದನ್ನು ಎತ್ತಿಕಟ್ಟುತ್ತಿದೆ. ಇವರಿಗೆ ನೈತಿಕತೆ ಇಲ್ಲ. ಇದನ್ನು ಅವರಿಗೆ ಕೇಳಿದ್ದು ಯಾರು? ಅದರಿಂದ ಯಾರಿಗೆ ಏನಾಗಬೇಕಿದೆ? ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹೆಸರಿದ್ದ ಜಾಗದಲ್ಲಿ ಇವರಿಬ್ಬರ ಹೆಸರನ್ನು ದ್ವಾರಕ್ಕೆ ಹಾಕಿದ್ದು ಅಕ್ಷಮ್ಯ ಅಪರಾಧ. ಯಾರೋ ಉಗಿದರು ಅಂತ ಬಳಿಕ ತೆಗೆದಿದ್ದಾರೆ. ಈ ಘಟನೆಯಿಂದ ಒಕ್ಕಲಿಗರ ಮತಗಳು ಬದಲಾಗಲ್ಲ. ಒಕ್ಕಲಿಗ ಮತ ಭದ್ರವಾಗಿದೆ ಎಂದರು ಕುಮಾರಸ್ವಾಮಿ ಅವರು.

    ಇವೆರೆಡೂ ಹೆಸರುಗಳು ಕಾಲ್ಪನಿಕ ಅಷ್ಟೇ. ಈ ಇಬ್ಬರ ಹೆಸರಲ್ಲಿ ಸಿನಿಮಾ ಮಾಡಬಹುದು, ಹಣ ಮಾಡಬಹುದು ಅಷ್ಟೇ. ಬೇರೆ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap