ಮಂಗಳೂರು:
ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿ ದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದಿರೇಟು ನೀಡಿದ್ದಾರೆ.
‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್
ಮಂಗಳೂರಿನಲ್ಲಿ ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಹಾಗೂ ಜಿಲ್ಲಾ ಪ್ರಮುಖರ ಸಭೆಯ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆಕಳೆದುಕೊಳ್ಳುತ್ತಿದ್ದಾರೆ.ಅವರ ಸ್ಥಿತಿ ನೋಡಿದರೆ ಪಾಪ ಕಾಂಗ್ರೆಸ್‌ನಲ್ಲೇ ಯಾರಿಗೂ ಬೇಡವಾದ ಕೂಸಾಗಿ ದ್ದಾರೆ. ಅದುದರಿಂದ ಈ ರೀತಿಯ ಹೇಳಿಕೆಗಳನ್ನು ನೀಡು ತ್ತಿದ್ದಾರೆ ಎಂದರು.
ಬಿಜೆಪಿ ದೇಶದಲ್ಲಿ, ರಾಜ್ಯದಲ್ಲಿ ಒಂದು ಆಲದ ಮರ ರೀತಿಯಲ್ಲಿ ಬೆಳೆದಿದೆ. ರೈತರಿಗೆ, ಕಾರ್ಮಿಕರಿಗೆ, ಬಡವರು ಸೇರಿದಂತೆ ಎಲ್ಲ ವರ್ಗಕ್ಕೂ ಶಕ್ತಿಯನ್ನು ತುಂಬುವ ಕಾರ್ಯ ಮಾಡಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನರ ಪ್ರೀತಿ, ವಿಶ್ವಾಸವನ್ನು ಗಳಿಸಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸಮರ್ಥ ನಾಯಕರಾಗಿದ್ದಾರೆ. ಇತ್ತೀಚಿನ ಪಂಚರಾಜ್ಯಗಳ ಚುನಾವಣೆ ಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ದೇಶದಲ್ಲಿ ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನ ಮರೆಯುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಒಳ್ಳೆಯ ಬಜೆಟ್ ನೀಡಿದೆ. 2023ರ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ನನ್ನ ರಾಜಕೀಯ ಇತಿಹಾಸದಲ್ಲೇ ಇವತ್ತಿನವರೆಗೆ ಈ ರೀತಿಯ ಕಂಪ್ಲೇಂಟ್ ಮಾಡಿಲ್ಲ, ಇದೇ ಮೊದಲು – ಸಚಿವ ಈಶ್ವರಪ್ಪ
ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎಲ್ಲ ಧರ್ಮೀಯರನ್ನು ಗೌರವದಿಂದ ಕಾಣಬೇಕು ಎಂದು ಈಗಾಗಲೇ ಮುಖ್ಯಮಂತ್ರಿಯವರು ಹೇಳಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ