ರಾಮನಗರ:
ಸಮ್ಮಿಶ್ರ ಸರ್ಕಾರದಲ್ಲಿ ಅಲ್ಪ ಮೊತ್ತದ ಸಂಖ್ಯೆ ಆದರೂ ಸಮೇತ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ಬೇಡಿಕೆ ಇಟ್ಟಿದ್ದರು ಅದನ್ನು ಒಪ್ಪಿದ್ದೆವು . ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದ ಡಿ.ಕೆ.ಶಿವಕುಮಾರ್ ಶುಕ್ರವಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಕ್ಷೇತ್ರದ ಹಲವೆಡೆ ಬಹಿರಂಗ ಸಭೆಗಳನ್ನ ನಡೆಸಿದರು. ಈ ವೇಳೆ ಬೃಹತ್ ಬೈಕ್ ರ‍್ಯಾಲಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಡಿಕೆಶಿ, ಜೆಡಿಎಸ್ ಹಾಗೂ ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ನಾನೂ ಕೂಡಾ ಇದೇ ಜಿಲ್ಲೆಯ ಮಗ. ನನಗೂ ಒಂದು ಅವಕಾಶ ಕೊಡಿ ಎನ್ನುವ ಮೂಲಕ ಮೂಲಕ ಸಿಎಂ ಆಸೆಯನ್ನು ಮತ್ತೊಮ್ಮೆ ಬಿಚ್ಚಿಟ್ಟರು.