ಬೆಂಗಳೂರು
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಒಟ್ಟು 224 ಕ್ಷೇತ್ರಗಳಿಂದ ಎಷ್ಟು ಅಭ್ಯರ್ಥಿಗಳಿಂದ ಎಷ್ಟು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಸಕ್ತ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿತ್ತು.
ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ 3,600 ಅಭ್ಯರ್ಥಿಗಳು ಒಟ್ಟು 5,102 ನಾಮಪತ್ರಗಳನ್ನು ಸಲ್ಲಿಸಿದ್ದು, ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಶುಕ್ರವಾರ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ