ಸಂಸದೆ ಮನೆಗೆ ನಡ್ಡಾ ಭೇಟಿ : ಏನಿದರ ಒಳಮರ್ಮ….?

ಬೆಳಗಾವಿ:

     ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಂಗಳವಾರ ಕುಂದಾನಗರಿಗೆ ಭೇಟಿ ನೀಡಿದ ನಂತರ ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ, ಇದರ ನಡುವೆಯೇ ಜೆಪಿ ನಡ್ಡಾ ಹಾಲಿ ಬಿಜೆಪಿ ಸಂಸದ ಮಂಗಳ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.

    ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸುವ ಒಂದು ದಿನ ಮುಂಚಿತವಾಗಿ ನಡ್ಡಾ ಭೇಟಿ ನೀಡಿರುವುದು ಸುರೇಶ್ ಅಂಗಡಿ ಅಥವಾ ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. 

    ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಅವರ ಪುತ್ರಿ ಶ್ರದ್ಧಾ ಶೆಟ್ಟರ್, ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಬೆಳಗಾವಿ ವಿಭಾಗದ ಮಾಜಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಸದೆ ಮಂಗಳಾ ಅಂಗಡಿ, ಹಾಗೂ ಅವರ ಮಗಳು ಸ್ಪೂರ್ತಿ ಪಾಟೀಲ್ ಸೇರಿದಂತೆ ಹಲವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. ಮಂಗಳವಾರ ಬೆಳಗಾವಿಗೆ ನಡ್ಡಾ ಆಗಮಿಸಿದ್ದ ವೇಳೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

   ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಷ್ಟವಾಗಿರುವುದರಿಂದ ಬೂತ್ ಮಟ್ಟದ ಕಾರ್ಯಕರ್ತರು ಮನಸ್ಥಿತಿಯನ್ನು ಅರಿಯಲು ನಡ್ಡಾ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದರು. ಪಕ್ಷದ ಹೈಕಮಾಂಡ್ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ಅವರ ಪರ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap