ಬೆಳಗಾವಿ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಂಗಳವಾರ ಕುಂದಾನಗರಿಗೆ ಭೇಟಿ ನೀಡಿದ ನಂತರ ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್‌ಗಾಗಿ ಹಲವು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ, ಇದರ ನಡುವೆಯೇ ಜೆಪಿ ನಡ್ಡಾ ಹಾಲಿ ಬಿಜೆಪಿ ಸಂಸದ ಮಂಗಳ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿರುವುದು ಊಹಾಪೋಹಗಳಿಗೆ ಕಾರಣವಾಗಿದೆ.
ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸುವ ಒಂದು ದಿನ ಮುಂಚಿತವಾಗಿ ನಡ್ಡಾ ಭೇಟಿ ನೀಡಿರುವುದು ಸುರೇಶ್ ಅಂಗಡಿ ಅಥವಾ ಜಗದೀಶ್ ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ.
ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಷ್ಟವಾಗಿರುವುದರಿಂದ ಬೂತ್ ಮಟ್ಟದ ಕಾರ್ಯಕರ್ತರು ಮನಸ್ಥಿತಿಯನ್ನು ಅರಿಯಲು ನಡ್ಡಾ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದರು. ಪಕ್ಷದ ಹೈಕಮಾಂಡ್ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ಅವರ ಪರ ಕೆಲಸ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ತಾಕೀತು ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ