ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ. ಆದರೆ ಅದರ ಬದಲಿಗೆ ‘ಬಿಜೆಪಿಯ ಬುಲ್ಡೋಜರ್’ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
जम्मू-कश्मीर को चाहिए रोज़गार, बेहतर व्यापार और प्यार, मगर उन्हें मिला क्या? भाजपा का बुलडोज़र!
कई दशकों से जिस ज़मीन को वहां के लोगों ने मेहनत से सींचा, उसे उनसे छीना जा रहा है।
अमन और कश्मीरियत की रक्षा, जोड़ने से होगी, तोड़ने और लोगों को बांटने से नहीं। pic.twitter.com/K8kJAn20H7
— Rahul Gandhi (@RahulGandhi) February 12, 2023
ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ನ್ಯಾಶನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗಳು ಈ ಅತಿಕ್ರಮ ತೆರವು ವಿರುದ್ಧ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿವೆ ಮತ್ತು ತಕ್ಷಣ ಅದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ