ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ   ಯಾವುದು? : HDK

ಬೆಂಗಳೂರು: 

     ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

     ಈ ಸಂಬಂಧ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ,  ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ. 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ   ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

 

    ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

    ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ , ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap