ಬೆಂಗಳೂರು:
ಭಾರತೀಯ ಕ್ರಿಕೆಟ್ ಕ್ಷೇತ್ರವು ಸೂಪರ್‌ಸ್ಟಾರ್‌ಗಳಿಂದಲೇ ತುಂಬಿದೆ. ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್ ಸೇರಿದಂತೆ ಹಲವು ಸ್ಟಾರ್ ಆಟಗಾರರು ದಶಕಗಳಿಂದ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿ ಅವರಂಥ ಇಂದಿನ ಪೀಳಿಗೆಯ ಆಟಗಾರರಿಗೂ ಕೋಟ್ಯಂತರ ಅಭಿಮಾನಿಗಳು ಇದ್ದಾರೆ.
ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ಹೊರತಾಗಿಯೂ ಅವರ ಸ್ಟಾರ್‌ಡಮ್ ಕಡಿಮೆಯಾಗಿಲ್ಲ. ಕೊಹ್ಲಿಯೂ ಅಷ್ಟೇ ಅಭಿಮಾನಿಗಳನ್ನು ಹೊಂದಿದ್ದಾರೆ. ಇಬ್ಬರೂ ಐಪಿಎಲ್ ಫ್ರಾಂಚೈಸಿಗಳಿಂದಾಗಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೊಹ್ಲಿ 2008ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದರೆ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಕೊಹ್ಲಿ ಮತ್ತು ಧೋನಿ ನಡುವೆ ತಮ್ಮ ಆಯ್ಕೆಯನ್ನು ಹೆಸರಿಸಿದ್ದಾರೆ. ನಟ ಬಾಲಕೃಷ್ಣ ಅವರೊಂದಿನ ಆ ಮಾತು ವೈರಲ್ ಆಗಿದ್ದು, ತಮಗೆ ಧೋನಿಗಿಂತ ಕೊಹ್ಲಿಯೇ ಬೆಸ್ಟ್ ಎಂದು ಹೇಳಿದ್ದಾರೆ
ಟೀಮ್ ಇಂಡಿಯಾ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತೊಡಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಮೊದಲ ಇನ್ನಿಂಗ್ಸ್‌ನ್ಲಿ ಭಾರತ 46 ರನ್‌ಗಳಿಗೆ ಆಲ್‌ಔಟ್ ಆಗಿತ್ತು.
ಎರಡನೇ ಇನಿಂಗ್ಸ್‌ನಲ್ಲಿ ಪುನರಾಗಮನ ಮಾಡಿದ್ದರು. ಆದರೆ ಪ್ರವಾಸಿ ತಂಡ ಎಂಟು ವಿಕೆಟ್‌ಗಳ ಆರಾಮದಾಯಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಅಕ್ಟೋಬರ್ 24ರಿಂದ ಪುಣೆಯಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಟೆಸ್ಟ್‌ನಲ್ಲಿ ಸೋಲಿನ ನಂತರ ಭಾರತವು ಮುಂಬರುವ ಪಂದ್ಯದಲ್ಲಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದೆ. ಏಕೆಂದರೆ ಡಬ್ಲ್ಯುಟಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನ ಉಳಿಸಿಕೊಳ್ಳುವ ಗುರಿ ಹೊಂದಿದೆ.








