ಹಾಸನ:
ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೊ ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂಬುದು ಇದೀಗ ಬಹಿರಂಗವಾಗಿದೆ.
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದನು. ಇದೀ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಂತರ ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಪೋಸ್ಟ್ ಮಾಡಿದ್ದನು. ಇದನ್ನು ಗಮನಿಸಿದ್ದ ಜೆಡಿಎಸ್ ಪೋಸ್ಟ್ ನ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ. ಇದೀಗ ನವೀನ್ ಗೌಡನಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.