ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು: ಸಿಎಂ

ಬೆಂಗಳೂರು 

    ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

    ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು.

    ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆಧ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದರು.

    ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ ನಡೆಸಿದ , ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತ ಮುತ್ಯಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅತ್ಯಂತ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap