ನೀಟ್‌ ಅಕ್ರಮದ ಕುರಿತಂತೆ ಮೋದಿ ಮೌನವಾಗಿರುವುದು ಏಕೆ….? : ಗೃಹ ಸಚಿವ

ಬೆಂಗಳೂರು:

    ನೀಟ್ ಅಕ್ರಮಗಳ ಬಗ್ಗೆ ಮೌನ ತಾಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಗೃಹ ಸಚಿವ ಪರಮೇಶ್ವರ್ ಅವರು ಮಂಗಳವಾರ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಳ್ಳಲು ನೀಟ್ ಸಂಸ್ಥೆಗಳನ್ನು ಮಾಡಿ ಸರಿಯಾಗಿ ಕೆಲಸ ಮಾಡದಿರುವುದು, ಮಕ್ಕಳ ಭವಿಷ್ಯ ಹಾಳು ಮಾಡುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ.

    ಇದನ್ನೆಲ್ಲ ಬಿಟ್ಟು 49 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಹೇರಿರುವುದನ್ನು ಮಾತನಾಡಲು ಹೊರಟಿರುವ ಬಿಜೆಪಿಯವರಿಗೆ ದೇಶದ ಅಭಿವೃದ್ಧಿ, ಭವಿಷ್ಯ, ಜನರ ಬಗ್ಗೆ ಕಾಳಾಜಿ ಇಲ್ಲದಿರುವುದನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.

    ಮರುಪರೀಕ್ಷೆಯಲ್ಲಿ ಕೆಲವು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬೇಕಲ್ಲವೇ… ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಲ್ಲವೇ? ಇದೆಲ್ಲವನ್ನೂ ಪ್ರಧಾನಿ ಅಥವಾ ಸಂಬಂಧಪಟ್ಟ ಸಚಿವರು ಜವಾಬ್ದಾರಿಯಿಂದ ನಿರ್ಧರಿಸಬೇಕು. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಪ್ರವೇಶಗಳು ಇಷ್ಟೊತ್ತಿಗೆ ಆರಂಭವಾಗಬೇಕಿತ್ತು. ಆದರೆ, ಇನ್ನೂ ಆಗಿಲ್ಲ. ಮಕ್ಕಳು ಗೊಂದಲದಲ್ಲಿದ್ದಾರೆ. ಅವರ ಭವಿಷ್ಯದ ಏನಾಗಬೇಕು ಎಂದು ಪ್ರಶ್ನಿಸಿದರು. 

    ತುರ್ತುಪರಿಸ್ಥಿತಿ 49 ವರ್ಷ ಆದ ಹಿನ್ನೆಲೆಯಲ್ಲಿ ಬಿಜೆಪಿಯವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿ, ದೇಶದಲ್ಲಿ ಜ್ವಲಂತ ಸಮಸ್ಯೆಗಳಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ದೇಶದಲ್ಲಿ ಬಡತನ ಇನ್ನೂ ಇದೆ. ಮತ್ತಷ್ಟು ಅಭಿವೃದ್ಧಿಯಾಗಬೇಕು, ಉದ್ಯೋಗ ಸಿಗಬೇಕಿದೆ ಎಂದು ಹೇಳಿದರು.

   ನಿಗಮ-ಮಂಡಳಿ ನೇಮಕ ವಿಚಾರ ಕುರಿತು ಮಾತನಾಡಿ, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿ, ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಅನುಭವವಿದೆ. ಆದ್ದರಿಂದ ಯಾವ ತೊಂದರೆಯಾಗುವುದಿಲ್ಲ. ಒಂದು ತಿಂಗಳೊಳಗಾಗಿ ಆಯ್ಕೆ ಮಾಡಿ, ಪಟ್ಟಿ ನೀಡುತ್ತೇನೆ ಎಂದು ತಿಳಿಸಿದರು.

    ಯುವತಿ ಪ್ರಬುದ್ಧ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡಿರುವ ಕುರಿತು ಮಾತನಾಡಿ, ಇದುವರೆಗೆ ನಡೆದ ತನಿಖೆಯಿಂದ ಪೋಷಕರಿಗೆ ಸಮಾಧಾನವಾಗದ ಕಾರಣ ಸಿಐಡಿ ತನಿಖೆಗೆ ಮನವಿ ಮಾಡಿದ್ದೇವೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap