ಮಂಡ್ಯ
ನೆನ್ನೆಯಿಂದ ಇಡೀ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಲಂಚಾವತಾರ ಪ್ರಕರಣದ ಹಿನ್ನೆಲೆ ಶಾಸಕ ವಿರೂಪಾಕ್ಷಪ್ಪ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಗ ಮಾಡಿರುವ ತಪ್ಪಿಗೆ ತಂದೆಗೆ ಯಾಕೆ ಶಿಕ್ಷೆ ನೀಡಬೇಕು.
ಅವರೇಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯ ಖಾಸಗಿ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್ರನ್ನು ಬಂಧಿಸಿದ್ದರು. ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಸಹ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ದಾಖಲೆ ಇಲ್ಲದ 6 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದರು.
ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಸಚಿವ ಜೆ.ಸಿ ಮಾಧುಸ್ವಾಮಿ, “ನಾವು ಈ ವಿಷಯದ ಬಗ್ಗೆ ಹೇಳಿಕೆ ನೀಡಲು ಆಗುವುದಿಲ್ಲ. ಶಾಸಕರ ಮಗ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ಲಂಚ ತೆಗೆದುಕೊಂಡಿದ್ದಾರೆ ಹೀಗಾಗಿ ಮುಂದಿನ ಪರಿಣಾಮ ಅವರೇ ಎದುರಿಸುತ್ತಾನೆ. ಆದರೆ, ಈ ವಿಷಯದಲ್ಲಿ ಶಾಸಕರು ಯಾಕೆ ರಾಜೀನಾಮೆ ಕೊಡಬೇಕು..? ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ