ಬೆಂಕಿ ವ್ಯಾಪಿಸುತ್ತಿದ್ದಂತೆ ಅಂದಾಜು 70-80 ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ದಿನೇ ದಿನೇ ಜಿಲ್ಲೆಯಲ್ಲಿ ವಾತಾವರಣ ಬಿಸಿ ಏರುತ್ತಿದ್ದು, ಈ ನಡುವೆ ಕಿಡಿಗೇಡಿಗಳ ಕೃತ್ಯದಿಂದ ಕಾಡು ಸುಟ್ಟು ಕರಕಲಾಗುತ್ತದೆ. ಕಳೆದ 3 ವರ್ಷಗಳಿಂದ ನಿರಂತರ ಮಳೆ, ಕೊರೊನಾ ಅಟ್ಟಹಾಸ ಇದ್ದಂತಹ ಸಂದರ್ಭದಲ್ಲಿ ಕಾಡಿಗೆ ಬೆಂಕಿ ಬಿದ್ದಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಕಾಡಿಗೆ ಬೇಸಿಗೆ ಕಂಟಕ ಆರಂಭವಾಗಿದೆ.
ಅಗ್ನಿ ಅವಘಡ ಸಂಭವಿಸಿ ಹುಲ್ಲಿನ ಮೆದೆಗಳು ಸುಟ್ಟು ಕರಕಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದಲ್ಲಿ ಬೇರೆ ಬೇರೆ ರೈತರು ಒಂದೇ ಜಾಗದಲ್ಲಿ 9 ಮೆದೆಗಳನ್ನು ಹಾಕಿದ್ದರು. ಇದೀಗ ಒಂದು ಮೆದೆಗೆ ಹತ್ತಿದ ಬೆಂಕಿ ಎಲ್ಲದಕ್ಕೂ ವ್ಯಾಪಿಸಿ ಭಾರಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಈ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.