ಹೈಕಮಾಂಡ್ಗೆ ಹಣ ವರ್ಗಾವಣೆ ಮಾಡಲು ಕರ್ನಾಟಕವನ್ನು ಕಾಂಗ್ರೆಸ್ ತನ್ನ ಎಟಿಎಂನಂತೆ ನಡೆಸಿಕೊಂಡಿದೆ. ಯಾರನ್ನು ಆಯ್ಕೆ ಮಾಡಬೇಕೆಂದು ನೀವು (ಮತದಾರರು) ನಿರ್ಧರಿಸಬೇಕು. ರಾಜ್ಯದ ಹಿತಕ್ಕಾಗಿ ಹೋರಾಡುವ ಪಕ್ಷ ವೇ ಅಥವಾ ರಾಜ್ಯವನ್ನು ತನ್ನ ಎಟಿಎಂ ಆಗಿ ಬಳಸುವ ಪಕ್ಷ ಬೇಕೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್‌ನಿಂದ ರಾಜ್ಯವನ್ನು ಅಭಿವೃದ್ಧಿ ಮಾಡಲು ಸಾಧ್ಯವೇ? ಎಂದು ಜನರನ್ನು ಪ್ರಶ್ನಿಸಿದ ಅವರು, ಎಲ್ಲರಿಗೂ ನ್ಯಾಯ ಕಲ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ಬಿಜೆಪಿಯನ್ನು ಬಹುಮತದಿಂದ ಆಯ್ಕೆ ಮಾಡಿ ಎಂದರು.ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಶಾ, ದೇಶವು ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಗಳಿಸಿದೆ ಮತ್ತು ಆರ್ಥಿಕತೆ ಸುಧಾರಿಸಿದೆ ಎಂದು ಹೇಳಿದರು. ಕಾಂಗ್ರೆಸ್ ಆಡಳಿತದಲ್ಲಿ ಭಾರತಕ್ಕೆ ತೊಂದರೆ ನೀಡುತ್ತಿದ್ದ ಪಾಕಿಸ್ತಾನ ಈಗ ಶಕ್ತಿಹೀನವಾಗಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ ದೇಶದಲ್ಲಿ ಕೋವಿಡ್ -19 ಸಾವುನೋವುಗಳು ತುಂಬಾ ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಾಕಷ್ಟು ಅನುದಾನ ನೀಡಿದೆ. ಸರ್ಕಾರವು ಹಲವು ಜಾತಿಗಳಿಗೆ ಮೀಸಲಾತಿಯನ್ನು ಒದಗಿಸಿದೆ ಮತ್ತು ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿಯನ್ನು ಹೆಚ್ಚಿಸಿದೆ ಎಂದು ಅಮಿತ್ ಶಾ ಹೇಳಿದರು . ರಾಯಚೂರಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಕುರಿತು ಮಾತನಾಡಿದ ಗೃಹ ಸಚಿವರು, ”ರಾಯಚೂರಿಗೆ ಐಐಐಟಿ ಮಂಜೂರಾಗಿದ್ದು, ಈಗ ವೈದ್ಯಕೀಯ ಕಾಲೇಜು ಕಾರ್ಯನಿರ್ವಹಿಸುತ್ತಿದೆ. ಇಂದು ರಾಯಚೂರು ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.