ಬೆಂಗಳೂರು:
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಕಸ್ಟಡಿ ಬುಧವಾರ ಅಂತ್ಯವಾಗುತ್ತಿದ್ದು, ಇಂದು ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಎಸ್‌ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ,ಎಂದು ಎಸ್ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.
ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ ಅಥವಾ ಜೈಲು ಪಾಲಾಗ್ತಾರಾ ಎಂಬ ಕುತೂಹಲ ಮೂಡಿಸಿದೆ.