ಬೆಂಗಳೂರು:
ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ರಥಯಾತ್ರೆ’ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ಭಾಗಿಯಾಗಿದ್ದರು.
ಆದರೆ ಚಾಮರಾಜನಗರ ಉಸ್ತುವಾರಿ ಸಚಿವ ವಿ.ಸೋಮಣ್ಣ ಗೈರು ಆಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸೋಮಣ್ಣ ಅವರಿಗೆ ಕಾಂಗ್ರೆಸ್ ಬಿಗ್ ಆಫರ್ ಸಹ ನೀಡಿದೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ.
ಚಾಮರಾಜನಗರ ಉಸ್ತುವಾರಿಯಾಗಿರುವ ವಿ.ಸೋಮಣ್ಣ ಇಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬೆಂಗಳೂರಿನವರು ಆದ್ರೂ ಸ್ಥಳೀಯವಾಗಿ ತಮ್ಮದೇ ಆದ ಪ್ರಾಬಲ್ಯವನ್ನು ವಿ.ಸೋಮಣ್ಣ ಹೊಂದಿದ್ದಾರೆ. ಚಾಮರಾಜನಗರದಲ್ಲಿ ತಮ್ಮದೇ ಕಾರ್ಯಕರ್ತರನ್ನು ವಿ.ಸೋಮಣ್ಣ ಹೊಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
