ಬೆಂಗಳೂರು :
ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ಸಂಬಂಧಿಸಿದ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆದು ತೀರ್ಮಾನ ದೊರೆಯಲಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಹಾಸಿಗೆ ದಿಂಬು ಕೋರಿ ಇನ್ನೊಂದು ಅರ್ಜಿ ಸಲ್ಲಿಸಲಾಗಿದೆ. ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಷ್ ಆರೋಪಿಗಳ ಶಿಫ್ಟ್ ಕುರಿತು ಅರ್ಜಿ ಸಲ್ಲಿಸಲಾಗಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಂತೆ ಪ್ರಾಸಿಕ್ಯೂಷನ್ ಕೋರಿದ್ದು, ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲಿರುವ ಆರೋಪಿಗಳ ಪರ ವಕೀಲರು. ಇಂದು ನ್ಯಾಯಾಲಯ ವಿಚಾರಣೆ ನಡೆಸಿ ಆದೇಶ ನೀಡಲಿದೆ.
ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ನಂತರ ದರ್ಶನ್‌ರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಈ ಬಾರಿ ದರ್ಶನ್ ಅವರ ಜಾಮೀನು ರದ್ದುಪಡಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕುರಿತು ಕಟುವಾಗಿ ಟೀಕಿಸಿತ್ತು. ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತ್ತು. ಹೀಗಾಗಿ ಕೆಳಗಿನ ಕೋರ್ಟ್ ಕೂಡ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ದರ್ಶನ್‌ರನ್ನು ಸ್ಥಳಾಂತರಿಸುವ ಒಲವು ತೋರಿಸುವ ಸಾಧ್ಯತೆಯೇ ದಟ್ಟವಾಗಿದೆ.
