ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸುತ್ತಾ ದೇವರಾಜೇಗೌಡ ಆಡಿಯೋ …..!

ಬೆಂಗಳೂರು:

    ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾನುವಾರ ಹೊಸ ತಿರುವು ಪಡೆದಿದೆ.

   ತಮ್ಮ ಪುತ್ರನ ಏಳಿಗೆಗಾಗಿ ಕುಮಾರಸ್ವಾಮಿಯೇ ಪ್ರಜ್ವಲ್ ಅವರ ಅಶ್ಲೀಲ ವಿಡಿಯ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಿ ಹೇಳಿಕೆ ನೀಡುವಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಮಾಡಿ ಸಂಸದ ಶಿವರಾಮೇಗಡ ಸೂಚನೆ ನೀಡಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

    ಸಾವಿರಾರು ಪೆನ್ ಡ್ರೈವ್ ಗಳನ್ನು ಸಾರ್ವಜಿಕವಾಗಿ ಹಂಚಿರುವುದರ ಹಿಂದೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್. ಶಿವರಾಮೇಗೌಡ ಹಾಗೂ ನಾಲ್ಕೈದು ಸಚಿವರ ಪಾತ್ರವಿದೆ ಎಂದು ಎರಡು ದಿನಗಳ ಹಿಂದೆ ಎಸ್ಐಟಿ ವಶದಲ್ಲಿರುವಾಗಲೇ ದೇವರಾಜೇಗೌಡ ನೀಡಿರುವ ಹೇಳಿಕೆಯ ವೈರಲ್ ಆಡಿಯೋ ಇದಕ್ಕೆ ಪುಷ್ಟಿ ನೀಡಿದೆ. 

    ಡಿಕೆ ಶಿವಕುಮಾರ್ ನನಗೆ 100 ಕೋಟಿ ಆಫರ್ ಮಾಡಿದ್ದರು ಎಂದು ಈ ಹಿಂದೆ ದೇವರಾಜೇಗೌಡ ಆರೋಪಿಸಿದ್ದರು. ಶಿವರಾಮೇಗೌಡ ಮೂಲಕ ನನ್ನನ್ನು ಸಂಪರ್ಕಿಸಿದ್ದರು ಎಂದೂ ಆರೋಪಿಸಿದ್ದರು. ಆದರೆ, ದೇವರಾಜೇಗೌಡ ಮೆಂಟಲ್ ಎನ್ನುವ ಮೂಲಕ ಡಿಕೆ.ಶಿವಕುಮಾರ್ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದರು. ಈ ನಡುವೆ ಸುದ್ದಿಗೋಷ್ಠಿ ನಡೆಸಿದ್ದ ಶಿವರಾಮೇಗೌಡ, ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಸಿದ್ದರು.

    ಇದರ ಬೆನ್ನಲ್ಲೇ ಶಿವರಾಮೇಗೌಡ ಹಾಗೂ ದೇವರಾಜೇಗೌಡ ನಡುವೆ ನಡೆದಿದ್ದು ಎನ್ನಲಾದ ಸಂಭಾಷಣೆಯ ಆಡಿಯೋವೊಂದು ವೈರಲ್ ಆಗಿದೆ.

    1 ನಿಮಿಷ 12 ಸೆಕೆಂಡ್‌ನ ಆಡಿಯೋದಲ್ಲಿ ಶಿವರಾಮೇಗೌಡ ಅವರು ಎಚ್‌ಡಿ ದೇವೇಗೌಡ ಹಾಗೂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕೀಳು ಮಟ್ಟದಲ್ಲಿ ಮಾತನಾಡಿರುವುದು ಕಂಡು ಬಂದಿದೆ. ಈ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap