ಮಧುಗಿರಿ:
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಕ್ಷೇತ್ರದ ಮತದಾರರು ಬಹುಮತಗಳಿಂದ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಳವಳ್ಳಿ ಮಾಜಿ ಶಾಸಕ ಶಿವಣ್ಣ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು. 2018 ರ ಚುನಾವಣೆಯಲ್ಲಿ ಕೆಲ ಪಿತೂರಿಯಿಂದ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಬೇಕಾಯಿತು. ಈಗ ರಾಜ್ಯದ ಜನರಿಗೆ ಸಿದ್ದರಾಮಯ್ಯ ನವರ ಅವಶ್ಯಕತೆ ಇದೆ.
ಅವರು ಮುಖ್ಯಮಂತ್ರಿಯಾಗಿದ್ದ ಸಂದÀರ್ಭದಲ್ಲಿ ಇಡೀ ರಾಜ್ಯಕ್ಕೆ ಅನೇಕ ಬಡವರ ಪರ ಜನಪರ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಅವರು ಕೇವಲ ಒಂದೆರಡು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯಕ್ಕೆ ಅವರ ಅವಶ್ಯಕತೆ ಇದೆ.
ಮುಂದಿನ ದಿನಗಳಲ್ಲಿ ನಡೆಯುವ ವಿಧಾನ ಸಭೆಯ ಚುನಾವಣೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಮುದಾಯದವರು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿ ಬಹುಮತಗಳೊಂದಿಗೆ ಸಿದ್ದರಾಮಯ್ಯನವರ ಸಹೋದರರಂತಿರುವ ಕೆ.ಎನ್.ರಾಜಣ್ಣ ನವರನ್ನು ಗೆಲ್ಲಿಸುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಸಂಕಲ್ಪ ಮಾಡಬೇಕಾಗಿದ್ದು ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಸೇರಿಕೊಂಡು ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮವಹಿಸುತ್ತಿದ್ದಾರೆ ಎಂದರು.
ತಾಲ್ಲೂಕು ಕನಕ ಸಮುದಾಯ ಭವನದ ಅಭಿವೃದ್ದಿಗೆ ಮಾಜಿ ಶಾಸಕ ಕೆ.ಎನ್.ರಾಜಣ್ಣರವರು ವೈಯಕ್ತಿಕವಾಗಿ ಧನ ಸಹಾಯ ಮಾಡಿರುವುದಕ್ಕೆ ಇದೇ ಸಂದÀರ್ಭದಲ್ಲಿ ಅಭಿನಂದಿಸಿದರು.
ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ತಿಮ್ಮರಾಜು, ತಾಪಂ ಮಾಜಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಹೆಚ್. ಚಲಪತಿ, ಗರಣಿ ವಿಎಸ್‍ಎಸ್‍ಎನ್ ಅಧ್ಯಕ್ಷ ರಾಮಾಂಜಿ, ಮರುವೇಕೆರೆ ವಿಎಸ್‍ಎಸ್‍ಎನ್ ಕಾರ್ಯದರ್ಶಿ ಬಾಬು, ತಾಲ್ಲೂಕು ಕನಕ ಕುರುಬರ ಸಂಘದ ಕಾರ್ಯದರ್ಶಿ ಎಂ. ಡಿ. ಆನಂದ್, ಮುಖಂಡರಾದ ಯಲ್ಲಯ್ಯ, ಈಶ್ವರ್, ಟಪಾಲ್ ಮಂಜುನಾಥ್, ಡಿಸಿಸಿ ಬ್ಯಾಂಕ್ ನಾಗರಾಜು, ಸಮುದಾಯದ ಮುಖಂಡರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
