ಗೃಹಲಕ್ಷ್ಮಿ ಹಣದಿಂದ : ಫ್ರಿಜ್‌ ಆಯ್ತು …..ಈಗ ಮೊಬೈಲ್‌ ಖರೀದಿಸಿದ ಮಹಿಳೆ ……!

ಬೆಂಗಳೂರು:

    ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ.

    ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ ಹೇಳಿಕೊಂಡಿದ್ದು, ಮೊಬೈಲ್ ವಾಲ್ ಪೇಪರ್ ನಲ್ಲಿ ಸಿಎಂ ಹಾಕಿಕೊಂಡಿರುವುದನ್ನು ತೋರಿಸಿದ್ದಾರೆ. 

    ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.

     ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap