ಬೆಂಗಳೂರು:
ಇತ್ತೀಚೆಗೆ ಕೆ.ಆರ್ ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಅಂತಹುದೇ ಮತ್ತೊಂದು ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ. ತಡರಾತ್ರಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ ನಡೆದಿದೆ.
ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು. ಪರಿಚಯಸ್ಥ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಊಟಕ್ಕೆಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋದ ಕಾಮುಕರು, ಬಳಿಕ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಿಳೆಯ ಮೊಬೈಲ್ ಹಾಗೂ ಪರ್ಸ್ ಕಿತ್ತುಕೊಂಡು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಪರಿಚಯಸ್ಥ ಮಹಿಳೆಯನ್ನು ಒಬ್ಬ ಹೋಟೆಲ್ ಟೆರೇಸ್ ಮೇಲೆ ಕರೆದಿಕೊಂಡು ಹೋಗಿದ್ದಾನೆ. ಈ ವೇಳೆ ಉಳಿದವರು ಅಲ್ಲೇ ಕಾದು ಕುಳಿತು ಆತನೊಂದಿಗೆ ಸೇರಿಕೊಂಡು ಸಾಮೂಹಿಕ ಆತ್ಯಾಚಾರ ಎಸಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗ್ಗೆ 5 ಗಂಟೆಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ, ಮಹಿಳೆಯ ದೂರನ್ನು ಆಧರಿಸಿ ಕೋರಮಂಗಲ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
