ಭಾರತದ ಪ್ರಪ್ರಥಮ ಮಹಿಳಾ ಡಿಜಿಪಿ ನಿಧನ!!

ಡೆಹ್ರಾಡೂನ್:

       ಭಾರತದ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿ (ಡಿಜಿಪಿ) ಕಾಂಚನ್ ಚೌಧರಿ ಭಟ್ಟಾಚಾರ್ಯ(72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

       ಕೆಲ ಕಾಲದಿಂದ ಅವರು ಅಸೌಖ್ಯದಿಂದ ಬಳಲುತ್ತಿದ್ದರು. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮುಂಬೈನಲ್ಲಿ ನಿಧನರಾಗಿದ್ದಾರೆ.

      ಹಿಮಾಚಲ ಪ್ರದೇಶದಲ್ಲಿ ಜನಿಸಿದ್ದ ಅವರು ಕಿರಣ್ ಬೇಡಿ ನಂತರ ದೇಶದ ಎರಡನೇ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದರು.  1973ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಭಟ್ಟಾಚಾರ್ಯ 2004ರಲ್ಲಿ ಉತ್ತರಾಖಂಡದ ಡಿಜಿಪಿಯಾಗಿ ನೇಮಕಗೊಂಡು ಇತಿಹಾಸ ನಿರ್ಮಿಸಿದ್ದರು. 2007ರಲ್ಲಿ ಅವರು ನಿವೃತ್ತರಾದರು.

       ನಿವೃತ್ತಿಯ ನಂತರ ಅವರು 2014ರ ಲೋಕಸಭಾ ಚುನಾವಣೆ ಸಂದರ್ಭ ರಾಜಕೀಯ ಪ್ರವೇಶಿಸಿ ಆಮ್ ಆದ್ಮಿ ಪಕ್ಷದ ಟಿಕೆಟ್ ನಲ್ಲಿ ಸ್ಪರ್ಧಿಸಿದರು. ಆದರೆ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ. 

        ಕಾಂಚನ್ ಚೌಧರಿ ಭಟ್ಟಾಚಾರ್ಯ ಅವರು ಇದೀಗ ಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap