ಜೀವ ಉಳಿಸಲು ಹೋಗಿ ಜೀವ ಕಳೆದುಕೊಂಡ ಮಹಿಳೆ

ಉಡುಪಿ

    ಮತ್ತೋರ್ವರ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣವನ್ನೇ ತೆತ್ತ (Death) ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ.

   ಸದಾ ಸಮಾಜಮುಖಿ ಚಿಂತನೆಯೊಂದಿಗೆ ಸಕ್ರಿಯವಾಗಿದ್ದ ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ತಮ್ಮ ಯಕೃತ್‌ನ ಒಂದು ಭಾಗವನ್ನು ಪತಿಯ ಸಂಬಂಧಿಗೆ ದಾನ ಮಾಡಿ ಇಹಲೋಕ ತ್ಯಜಿಸಿದ್ದಾರೆ. ಅಕಾಲಿಕ ನಿಧನದಿಂದ ಅರ್ಚನಾ ಅವರ ಸಂಬಂಧಿಕರು, ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.

   ತಮ್ಮ ಪತಿಯ ಕುಟುಂಬದ ಸಂಬಂಧಿಗೆ ಯಕೃತ್ತಿನ ಕಸಿ ಅಗತ್ಯವಿತ್ತು. ಆದರೆ ಕುಟುಂಬದ ಯಾವದೇ ಇತರ ಸದಸ್ಯರ ರಕ್ತದ ಮಾದರಿ ರೋಗಿಯ ರಕ್ತದ ಮಾದರಿಗೆ ಹೊಂದಾಣಿಕೆಯಾಗಿಲ್ಲ. ಕೊನೆಗೆ ಅರ್ಚನಾ ಅವರ ರಕ್ತದ ಮಾದರಿ ಹೊಂದಾಣಿಕೆಯಾಗಿತ್ತು, ಅವರು ತಮ್ಮ ಯಕೃತ್ತಿನ ಭಾಗವನ್ನು ದಾನ ಮಾಡಲು ಒಪ್ಪಿಕೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ 12 ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ನಡೆದಿದ್ದು, ಅರ್ಚನಾ ಅವರ ಯಕೃತ್ತಿನ ಒಂದು ಭಾಗವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಬಳಿಕ ಅರ್ಚನಾ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕೆಲ ದಿನಗಳ ಬಳಿಕ ಜ್ವರ ಕಾಣಿಸಿಕೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸಾವು ಸಂಭವಿಸಿದೆ. 

   ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿಯಲ್ಲಿ ಭಾನುವಾರ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ. ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಇ ಎಸ್​ ಶ್ಯಾಮಣ್ಣ ಹಾಡಿಗೆ ಹೆಜ್ಜೆ ಹಾಕುವ ವೇಳೆ ತಲೆಸುತ್ತು ಬಂದು ಅಸ್ವಸ್ಥರಾಗಿದ್ರು. ಬಳಿಕ ಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

   ಡಿವೈಡರ್ ಗೆ ಡಿಕ್ಕಿಯಾಗಿ ಗಾಯಗೊಂಡಿದ್ದ ಕಾರಿನಲ್ಲಿದ್ದ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಮೊನ್ನೆ ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ನಡೆದಿದ್ದ ಅಪಘಾತದಲ್ಲಿ 7 ವರ್ಷದ ಬಾಲಕಿ ಶಾಲಿನಿ ಮೃತಪಟ್ಟಿದ್ದಳು. ಅದೇ ಕಾರಿನಲ್ಲಿದ್ದು ಗಾಯಗೊಂಡಿದ್ದ 16 ವರ್ಷದ ಬಸವೇಶ್​ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಮಲ್ಲಿಕಾರ್ಜುನ್​ಗೆ ಚಿಕಿತ್ಸೆ ಮುಂದುವರೆಸಲಾಗಿದೆ. 

   ಈದ್ ಮಿಲಾದ್ ಮೆರವಣಿಗೆ ವೇಳೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ ಘಟನೆ ನಡೆದಿದ್ದು, ಸೈಯ್ಯದ್ ಸಲ್ಮಾನ್, ಸೈಯದ್ ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹಮದ್, ಎಂಬುವರಿಗೆ ಗಾಯಗೊಂಡಿದ್ದಾರೆ. ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆದಿದೆ. ಗಾಯಳುಗಳನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

Recent Articles

spot_img

Related Stories

Share via
Copy link
Powered by Social Snap