ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ..!

ಬೆಂಗಳೂರು: 

     ಇತ್ತೀಚಿನ ದಿನಮಾನಗಳಲ್ಲಿ ಪಾರ್ಟಿ ಮಾಡುವ ಸಂಸ್ಕೃತಿ ಹೆಚ್ಚಾಗುತ್ತಿದ್ದು ಈ ಸಂಸ್ಕೃತಿಯಲ್ಲಿ ಖುಷಿಗೆಂದು ಮಾಡುತ್ತಿದ್ದ ಈ ಕಯಾಲಿ ಈಗ ಕೆಟ್ಟ ಕೆಲಸ ಮಾಡಲೂ ಪ್ರೇರಣೆ ನೀಡುತ್ತಿವೆ. ಪಾರ್ಟಿ  ನೆಪದಲ್ಲಿ ಸ್ನೇಹಿತರಿಂದಲೇ ಯುವತಿರ ಮೇಲೆ ಅತ್ಯಾಚಾರಕ್ಕೆ ಯತ್ನ‌‌ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಸೇರಿ ಪಾರ್ಟಿ ಆಯೋಜಿಸಿದ್ದರು. ಕಾಶ್ಮೀರ ಮೂಲದ ಓರ್ವ ಯುವತಿ ಮತ್ತು ಇಬ್ಬರು ಉತ್ತರ ಭಾರತ ಮೂಲದ ಯುವಕರು ಪಾರ್ಟಿಗೆ ಪ್ಲಾನ್ ಮಾಡಿದ್ದರು. ಈ ವೇಳೆ ಕುಡಿದ ನಶೆಯಲ್ಲಿ ಇಬ್ಬರೂ ಆರೋಪಿಗಳು ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಲಾಗಿದೆ.

     ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಆರೋಪಿ ಯುವಕರು ಮತ್ತು ಸಂತ್ರಸ್ತ ಯುವತಿಯರು ಕೆಲಸ ಮಾಡುತ್ತಿದ್ದರು. ಒಂದೇ ಯೂನಿರ್ವಸಿಯಲ್ಲಿ ಓದಿದ್ದ ಸ್ನೇಹಿತರಾಗಿದ್ದರಿಂದ ಇದೇ ಸಲುಗೆ ಮೇಲೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

      ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ