ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನ

ಭೋಪಾಲ್‌: 

    ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನಿನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಿನೌಟಾದಲ್ಲಿ ಎರಡು ಕುಟುಂಬಗಳ ನಡುವೆ ಜಮೀನು ಜಗಳ ನಡೆಯುತ್ತಿತ್ತು. ಒಂದು ಕಡೆಯ ಗುಂಪು ಜಮೀನಿನ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅದನ್ನು ಇನ್ನೊಂದು ಕಡೆಯ ಗುಂಪು ವಿರೋಧಿಸುತ್ತಿತ್ತು ಎಂದು ತಿಳಿದು ಬಂದಿದೆ.

   ಆದರೂ ಕಾಮಗಾರಿ ಮುಂದುವರೆಯುತ್ತಿತ್ತು. ಇದನ್ನು ವಿರೋಧಿಸಿ ಇನ್ನೊಂದು ಗುಂಪಿನ ಮಹಿಳೆಯರು ಜಮೀನಿನಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದರು. ಆಗ ಕಾಮಗಾರಿ ನಡೆಸುತ್ತಿದ್ದ ಗುಂಪಿನ ಆದೇಶದಂತೆ ಟಿಪ್ಪರ್‌ ಚಾಲಕ, ಕಲ್ಲು ಮಣ್ಣನ್ನು ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಮೇಲೆ ತಂದು ಸುರಿದು, ಜೀವಂತ ಸಮಾಧಿಗೆ ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap