ಮಹಿಳಾ ದಿನಾಚರಣೆ : ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ

ನವದೆಹಲಿ:

    ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.

   ಸಾಮಾಜಿಕ ಮಾಧ್ಯಮ ಎಕ್ಸ್​ ನಲ್ಲಿ ಪ್ರಧಾನಿ ಮೋದಿಯವರು ಈ ಘೋಷಣೆಯನ್ನು ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

   ‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

   ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜೊತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap