ನವದೆಹಲಿ:
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದೆ ನಡೆದ ಉಗ್ರರ ದಾಳಿಗೆ ಪ್ರತಿಕಾರದ ಪ್ರತಿಜ್ಞೆ ಮಾಡಿರುವ ಭಾರತ, ಕುತಂತ್ರಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಂಧೂ ಜಲ ಒಪ್ಪಂದ ರದ್ದು ಸೇರಿದಂತೆ ಪಾಕ್ ವಿರುದ್ಧ ಭಾರತ ಐದು ಮಹತ್ವದ ನಿರ್ಧಾರಗಳನ್ನು ಘೋಷಿಸಿದೆ. ಇದೀಗ ಇದರ ಬೆನ್ನಲ್ಲೇ ಭಾರತದಲ್ಲಿ ಭಾರತ ಇದೀಗ ಪಾಕಿಸ್ತಾನ ಸರ್ಕಾರದ ಎಕ್ಸ್ ಖಾತೆ ಬ್ಲಾಕ್ ಮಾಡಲಾಗಿದೆ.
