ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿಯಲು ಮರಿತಿಬ್ಬೇಗೌಡ ಗೆ ಮಾಜಿ ಎಂಎಲ್ಸಿ ಮನವಿ

ಮೈಸೂರು: 

     ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್‌ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.

   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಚುನಾಯಿತರಾಗಿದ್ದ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಅವರು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿಲ್ಲ. ಅವರು ಇತ್ತೀಚೆಗಷ್ಟೇ ಎಂಎಲ್‌ಸಿ ಹಾಗೂ ಜೆಡಿಎಸ್‌ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು. ಈಗ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದರು.

   ಮರಿತಿಬ್ಬೇಗೌಡರು ತಮ್ಮನ್ನು ಭೇಟಿ ಮಾಡಲು ಬರುವವರ ಜೊತೆ ಸೌಜನ್ಯದಿಂದ ವರ್ತಿಸುವುದಿಲ್ಲ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ವೇತನ ಹೆಚ್ಚಳವಾಗಿಲ್ಲ, ಹಳೆ ಪಿಂಚಣಿ ಯೋಜನೆ ಜಾರಿಯಾಗಿಲ್ಲ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ, ಶಿಕ್ಷಣ ಇಲಾಖೆ ಕಟ್ಟಡ ವರ್ಷಗಳೇ ಕಳೆದರೂ ದುರಸ್ತಿ ಕಂಡಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ ಎಂದರು.

Recent Articles

spot_img

Related Stories

Share via
Copy link
Powered by Social Snap