ವೈಎಸ್ ಶರ್ಮಿಳಾ ಬಂಧನ : 14ದಿನ ಪೊಲೀಸ್‌ ಕಸ್ಟಡಿಗೆ

ಹೈದರಾಬಾದ್: 

      ಪೊಲೀಸ್‌ ಅಧಿಕಾರಿ ಮೇಲಿನ ಹಲ್ಲೆ ಆರೋಪದ ಮೇರೆಗೆ ರಾಜಕಾರಣಿ ವೈಎಸ್‌ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

      ವೈಎಸ್ ಶರ್ಮಿಳಾ ತಮ್ಮ ನಿವಾಸದ ಹೊರಗೆ ಪೊಲೀಸರ ಜತೆ ವಾಗ್ವಾದ ನಡೆಸಿದ್ದು, ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಸೋಮವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲವಾಗಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಉಪ ಕಮಿಷನರ್ (ಪಶ್ಚಿಮ ವಲಯ) ಜೋಯಲ್ ಡೇವಿಸ್ ಅವರು, ‘ಶರ್ಮಿಳಾ ಅವರು ಅನುಮತಿ ಪಡೆಯದೇ ಪ್ರತಿಭಟನೆಯೊಂದರಲ್ಲಿ ಭಾಗವಹಿಸಲು ಶರ್ಮಿಳಾ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಆಗ ಅವರ ಮೇಲೆ ಶರ್ಮಿಳಾ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಅವರು ಎಸ್‌ಐಟಿ ಕಚೇರಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಾಗ, ಅವರು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಹಾಗಾಗಿ, ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿದ್ದರು’ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap