ಹೈದರಾಬಾದ್:
ಪೊಲೀಸ್ ಅಧಿಕಾರಿ ಮೇಲಿನ ಹಲ್ಲೆ ಆರೋಪದ ಮೇರೆಗೆ ರಾಜಕಾರಣಿ ವೈಎಸ್ ಶರ್ಮಿಳಾರನ್ನು ಪೊಲೀಸರು ಬಂಧಿಸಿದ್ದು, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ವೈಎಸ್ ಶರ್ಮಿಳಾ ತಮ್ಮ ನಿವಾಸದ ಹೊರಗೆ ಪೊಲೀಸರ ಜತೆ ವಾಗ್ವಾದ ನಡೆಸಿದ್ದು, ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಸೋಮವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲವಾಗಿದ್ದು, ಈ ವೇಳೆ ನ್ಯಾಯಾಧೀಶರು ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.