ಗೃಹ ಸಚಿವರ ವಿರುದ್ಧ ಯಶ್‌ ಪಾಲ್‌ ಟೀಕೆ…….!

ಉಡುಪಿ: 

     ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು, ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಇಡಲು ಹಿಂಜರಿಯುವುದಿಲ್ಲ ಎಂದರು.

     ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರು ಕಿವುಡ ಹಾಗೂ ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

     ಪರಮೇಶ್ವರ್ ಅವರು ಈ ಪ್ರಕರಣವನ್ನು ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಯಶ್‌ಪಾಲ್‌ ಸುವರ್ಣ ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap