ಮುಡಾ ಹಗರಣ : ಶಾಸಕ ಯತೀಂದ್ರ ಶಾಕಿಂಗ್ ಹೇಳಿಕೆ

ಮೈಸೂರು :

   ಮುಡಾ ಹಗರಣ ವಿಷಯ ಇನ್ನೂ ತಣ್ಣಗಾಗಿಲ್ಲ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾಗಿದ್ದ ಬದಲಿ ನಿವೇಶನಗಳನ್ನು ಮುಡಾಗೆ ವಾಪಸ್‌ ಕೊಟ್ಟರೂ ಸಂಕಷ್ಟ ತಪ್ಪಿಲ್ಲ. ಈ ಹಗರಣದ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಕುಟುಂಬದವರು ಹೇಳಿಕೆ ಕೊಟ್ಟಿದ್ದು ಕಡಿಮೆ. ಅಲ್ಲದೇ ಮುಡಾ ಹಗರಣದ ವಿಚಾರದಲ್ಲಿ ಅವರ ಪತ್ನಿ ಸಹ ಇಲ್ಲಿಯವರೆಗೆ ಯಾವುದೇ ಹೇಳಿಕೆ ಕೊಟ್ಟಿಲ್ಲ.ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಹಾಗೂ ಶಾಸಕ ಯತೀಂದ್ರ ಅವರು ಮಾತನಾಡಿದ್ದಾರೆ.

   ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ. ಅಲ್ಲದೇ ರಾಜಕೀಯ ಜೀವನದಲ್ಲಿ ಈ ಹಿಂದೆ ಎಂದೂ ಈ ಪರಿ ಮುಜುಗರಕ್ಕೆ ಒಳಗಾಗಿರಲಿಲ್ಲ. ಇದೀಗ ಅವರ ಮಗ ಯತೀಂದ್ರ ಅವರು ಈ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.

   ಪ್ರಧಾನಿ ನರೇಂದ್ರ ಮೋದಿ ಅವರು ಇಡಿ, ಐಟಿ ಛೂಬಿಟ್ಟು ಕಂಪನಿಗಳಿಂದ ಸುಲಿಗೆ ಮಾಡಿಸಿದ್ದಾರೆ. ಅಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಎಂದರೆ ದೇಶಕ್ಕೆ ಅದಕ್ಕಿಂತ ದೊಡ್ಡ ದುರಂತ ಬೇರಿಲ್ಲ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಬೇಕು. ಅದನ್ನು ಬೀಳಿಸಬೇಕು. ಅದಕ್ಕೆ ತಡೆಯಾದ ಸಿಎಂ ಸಿದ್ದರಾಮಯ್ಯ ಅವರನ್ನು ಮೊದಲು ಕೆಳಗಿಳಿಸಿದರೆ ಕಾಂಗ್ರೆಸ್ ಶಕ್ತಿಹೀನವಾಗುತ್ತದೆ ಎಂದು ಅವರ ಮೇಲೆ ಇಡಿ ದಾಳಿ ಮಾಡಿಸಿದ್ದಾರೆ ಎಂದು ಯತೀಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.

   ಪ್ರಧಾನಿ ನರೇಂದ್ರ ಮೋದಿ ಅವರು, ದೇಶದಲ್ಲಿ ಇಲೆಕ್ಟ್ರಾಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು.

   ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನಿಲ್ಲದಂತೆ ಮುಜುಗರಕ್ಕೆ ಒಳಗಾಗಿದ್ದಾರೆ. ಇದೀಗ ಸಿದ್ದರಾಮಯ್ಯ ಹಾಗೂ ಮುಡಾ ಬಗ್ಗೆ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಮಾತನಾಡಿದ್ದಾರೆ. ಮುಡಾ ಹಗರಣದಲ್ಲಿ ಅಧಿಕಾರಿಗಳು ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದರಲ್ಲಿ ಅರ್ಥವೇ ಇಲ್ಲ ಎಂದು ಅವರು ಹೇಳಿದ್ದಾರೆ.

   ಮುಡಾ ವಿಷಯದಲ್ಲಿ ಅಧಿಕಾರಿಗಳು ಪ್ರಕರಣವನ್ನು ಪಾರದರ್ಶಕವಾಗಿ, ನ್ಯಾಯೋಚಿತವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ ವಿರೋಧ ಪಕ್ಷದವರು ಜನರಲ್ಲಿ ಈ ಬಗ್ಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶಾದ್ಯಂತ ಕಾಂಗ್ರೆಸ್ ಆಡಳಿತ ಇರುವ ಮುಖಂಡರ ಮೇಲೆ ಇಡಿ ದಾಳಿ ನಡೆಸಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಿವೆ ಎಂದರು.   ಚನ್ನಪಟ್ಟಣದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದವರು ಕುರಾನ್ ಪುಸ್ತಕ, ಪ್ರಾರ್ಥನೆಗಾಗಿ ಮ್ಯಾಟ್ ಜೊತೆ ಒಂದು ಸಾವಿರ ರೂಪಾಯಿ ಕೊಡ್ತಾ ಇರುವ ವಿಷಯ ಎಲ್ಲರಿಗೂ ತಿಳಿದಿದೆ. ಅಂಥವರು ಉಪ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಈ ರೀತಿ ವಿಪಕ್ಷದವರು ಪ್ರತಿ ಚುನಾವಣೆ ಸಂದರ್ಭದಲ್ಲಿ ಆಪಾದಿಸುವುದು ಸಾಮಾನ್ಯ ಎಂದರು.

   ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಪಕ್ಷವು ಗೆಲ್ಲಲಿದೆ. ಎಲ್ಲೆಡೆ ಪಕ್ಷದ ಪರ ಉತ್ತಮ ವಾತಾವರಣವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Recent Articles

spot_img

Related Stories

Share via
Copy link