ಬೆಂಗಳೂರು:
ವಕ್ಫ್ ಪರ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಹೋರಾಟ ಮಾಡುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ರೈತರ ಜಮೀನುಗಳಲ್ಲಿನ ಪಹಣಿ ಪತ್ರದಲ್ಲಿನ ಕಾಲಂ ನಂಬರ್ 11ರ ಋಣಗಳು ಕಾಲಂನಲ್ಲಿ “ಕರ್ನಾಟಕ ವಕ್ಫ್ ಬೋರ್ಡ್ ಬೆಂಗಳೂರು ಮಸಜಿತ್ (ಸುನ್ನಿ) ವಕ್ಫ್” ಎಂದು ನಮೂದಿಸಿರುವುದಾಗಿ ನಮ್ಮ ವಿಜಯಪುರದ ರೈತರು ತಿಳಿಸಿದ್ದಾರೆ. ಕೇಂದ್ರದಲ್ಲಿ ವಿವಾದಿತ ಕಾಯ್ದೆ ಮರುಪರಿಶೀಲನೆಗಾಗಿ ಜಂಟಿ ಸಂಸತ್ ಸಮಿತಿ ರಚನೆಯಾಗಿರುವಾಗ ತರಾತುರಿಯಲ್ಲಿ ಪಹಣಿಯನ್ನು ಬದಲಿಸಿ ವಕ್ಫ್ ಬೋರ್ಡ್ ಹೆಸರು ನಮೂದಿಸಿರುವ ವಕ್ಫ್ ಈ ನಿರಂಕುಶ ನಡೆ ಖಂಡನೀಯ ಹಾಗೂ ಅಸಂವಿಧಾನಿಕವಾಗಿದೆ.
ಅನ್ನದಾತನ ಜಮೀನನ್ನು ತಂದು ಎಂದು ಹೇಳುವ ಹಕ್ಕು ವಕ್ಫ್ ಅವರಿಗಿಲ್ಲ. ಯಾವುದೋ ಒಂದು ಸಮುದಾಯದ ತುಷ್ಟೀಕರಣ ಮಾಡಲು ನಾಡಿನ ಅನ್ನದಾತಾರನ್ನು ಒಕ್ಕಲೆಬ್ಬಿಸಲು ಹೊರಟಿರುವ ಈ ಕ್ರಮ ಸರ್ಕಾರದ ಆದ್ಯತೆಗಳನ್ನು ತಿಳಿಸುತ್ತದೆ. ಜಂಟಿ ಸಂಸತ್ ಸಮಿತಿಯ ಆದೇಶ ಹಾಗೂ ಶಿಫಾರಸುಗಳು ಹೊರ ಬರುವವರೆಗೂ ರೈತರ ಪಹಣಿ ಯಥಾಸ್ಥಿತಿಯಂತೆ (status quo) ಇರಬೇಕು. ಸರ್ಕಾರ ಈ ನಿರ್ಣಯ ವಾಪಾಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಈ ವಕ್ಫ್ ಪರ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಹೋರಾಟ ಮಾಡುವುದು ನಿಶ್ಚಿತ ಎಂದಿದ್ದಾರೆ.
