ಶಿವಮೊಗ್ಗ:
ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ. ನಿವೇಶನ ವಾಪಾಸ್ ನೀಡಿದ್ದರೂ ಅಪರಾಧ ಅಪರಾಧವೇ ಆಗಿದೆ. ಮುಡಾದಲ್ಲಿ ಸಾವಿರಾರು ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪವಿದೆ. ಇ.ಡಿ. ರಂಗಕ್ಕೆ ಇಳಿಯಬೇಕಾದರೆ ಸೂಕ್ತ ಸಾಕ್ಷ್ಯವಿಲ್ಲದೇ ಅವರು ಬರುವುದಿಲ್ಲ. ಸಾಕಷ್ಟು ಪುರಾವೆ ಸಿಕ್ಕಿದ್ದರಿಂದಲೇ ಇ.ಡಿ. ಪ್ರವೇಶ ಮಾಡಿದೆ ಎಂದರು.