ಪಕ್ಷದಿಂದ ಯತ್ನಾಳ್‌ ಉಚ್ಚಾಟಿಸಿದ ಬಿಜೆಪಿ…!

ಬೆಂಗಳೂರು: 

    ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಸೇರಿ ಐವರು ನಾಯಕರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿದ್ದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಈ ಹಿಂದೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಇಂದು ಕೈಗೊಂಡಿದೆ.