ಕುತಂತ್ರದಿಂದ BSY ಬಂಧಿಸುವ ಯತ್ನ : ಬಿಜೆಪಿ

ಬೆಂಗಳೂರು: 

    ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

    ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ್ಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ.

   ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ. ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಪರಮೇಶ್ವರ್ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.

   ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

   ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಕಿಡಿ ಕಾರಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap