ಮದುವೆಯಾಗಲು ನಿರಾಕರಣೆ: ಯುವಕನಿಂದ ಯುವತಿಯ ಹತ್ಯೆ: ಯಲ್ಲಾಪುರದಲ್ಲಿ ಬೀಭತ್ಸ ಘಟನೆ

ಯಲ್ಲಾಪುರ :

    ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಭೀಕರ ಹತ್ಯೆ ಘಟನೆ ನಡೆದಿದೆ. ಜನವರಿ 3, 2026ರ ಶನಿವಾರ ಬೆಳಗ್ಗೆ ನಡುರಸ್ತೆಯಲ್ಲೇ ರಂಜಿತಾ ಎಂಬ ವಿವಾಹಿತ ಮಹಿಳೆಯನ್ನು ಪ್ರೇಮಿ ರಫೀಕ್ ಎಂಬ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

    ರಂಜಿತಾ ಯಲ್ಲಾಪುರ ಪಟ್ಟಣದ ನಿವಾಸಿಯಾಗಿದ್ದು, ಆಕೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎನ್ನಲಾಗಿದೆ. ಕಳೆದ ಕೆಲವು ವರ್ಷಗಳಿಂದ ರಫೀಕ್ ರಂಜಿತಾಳನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗುವಂತೆ ಒತ್ತಾಯ ಮಾಡುತ್ತಿದ್ದನು. ಆದರೆ ರಂಜಿತಾ ಮದುವೆಗೆ ಸಮ್ಮತಿಸದೇ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡ ರಫೀಕ್, ನಡು ರಸ್ತೆಯಲ್ಲೇ ಚಾಕುವಿನಿಂದ ಆಕೆಯ ಮೇಲೆ ದಾಳಿ ನಡೆಸಿದ್ದಾನೆ.

     ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ರಫೀಕ್ ಸ್ಥಳದಿಂದ ಪರಾರಿಯಾಗಿದ್ದು, ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಹುಡುಕಾಟ ನಡೆಸುತ್ತಿದ್ದಾರೆ.ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರೇಮ ನಿರಾಕರಣೆಯಿಂದ ಉಂಟಾದ ಹತ್ಯೆಗಳ ಸರಣಿಯಲ್ಲಿ ಮತ್ತೊಂದು ದುರಂತವಾಗಿ ಪರಿಣಮಿಸಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ

Recent Articles

spot_img

Related Stories

Share via
Copy link