ಬೆಂಗಳೂರು:
ಮುಂದಿನ ನಾಲ್ಕು ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಇನ್ನು ಸೆ.11ರಂದು ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹಾಗೆಯೇ ಸೆ.12ರಂದು ಕೂಡ ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸೆ.13ರಂದು ಕೂಡ ರಾಜ್ಯದ ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸೆ.14ರಂದು ಹಾವೇರಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.








