ರಾಜ್ಯಾದ್ಯಂತ ಧಾರಾಕಾರ ಮಳೆ : ತುಮಕೂರು ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಣೆ ….!

ಬೆಂಗಳೂರು :

     ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬೀಳುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

 
   ಕೃಷ್ಣರಾಜಪೇಟೆ, ತಾವರಗೇರಾ, ಹುಮನಾಬಾದ್, ಕಮ್ಮರಡಿ, ಸಿದ್ದಾಪುರ, ಉಡುಪಿ, ಕಿರವತ್ತಿ, ತ್ಯಾಗರ್ತಿ, ಹೊನ್ನಾಳಿ, ಹೆಸರಘಟ್ಟ, ನಾಗಮಂಗಲ, ದಾವಣಗೆರೆ, ರಾಮನಗರ, ಪೊನ್ನಂಪೇಟೆ, ಕಳಸ, ಮಾಣಿ, ಶಿರಹಟ್ಟಿ, ಖಜೂರಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಹೆಚ್ಚಾಗಿದ್ದು, ಸೋಮವಾರವೂ ಮಳೆ ಸುರಿಯುತ್ತಲೇ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಈ ಚಂಡಮಾರುತ ಪರಿಚಲನೆಯಿಂದಾಗಿ ಕರ್ನಾಟಕ ಆಂಧ್ರ ಪ್ರದೇಶ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗಲಿದೆ. ಸದ್ಯ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇಲ್ಲಿ ಚಂಡಮಾರುತ ಪರಿಚಲನೆಯ ವಾತಾವರಣ ನಿರ್ಮಾಣವಾಗಿದೆ. ಇದು ಮುಂದಿನ 2 ದಿನಗಳಲ್ಲಿ ಮತ್ತುಷ್ಟು ತೀವ್ರಗೊಂಡು ಹಲವು ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ.

Recent Articles

spot_img

Related Stories

Share via
Copy link
Powered by Social Snap