ಕರ್ನಾಟಕ : 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​….!

ಬೆಂಗಳೂರು

    ಕರ್ನಾಟಕದಾದ್ಯಂತ ಮೇ 13ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

    ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಎಂಎಂ ಹಿಲ್ಸ್​, ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

    ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಬೆಳಗಾವಿ ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link